Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳಿಂದ ಪ್ರಾ.ಆ.ಕೇಂದ್ರ-ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ


ಶಿವಮೊಗ್ಗ ಏ.07 : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿAದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು.

ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು. ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು.

ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ: ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆ ಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ