ಬಳ್ಳಾರಿ,ಜು.30
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಆಗಸ್ಟ್ 01 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಜಾಗೃತಿ ಜಾಥಾ:
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8.30 ಗಂಟೆಗೆ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ‘ಹೊಂಗಿರಣ'ದವರೆಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಬಳ್ಳಾರಿ ಲೋಕಸಭಾ ಸಂಸದ ಈ. ತುಕಾರಾಮ್, ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸಂಸದ ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಹಾಗೂ ಶಾಸಕರಾದ ಜೆ.ಎನ್. ಗಣೇಶ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ. ನಾಗೇಂದ್ರ, ಬಿ.ಎಮ್. ನಾಗರಾಜ್, ಈ. ಅನ್ನಪೂರ್ಣ, ವಿಧಾನಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ವೈ.ಎಮ್. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್. ಆಂಜನೇಯಲು, ಕೆ.ಎಸ್.ಎಮ್.ಸಿ.ಎಲ್. ಉಪಾಧ್ಯಕ್ಷ ಹೆಚ್. ಲಕ್ಷö್ಮಣ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಳ್ಳಾರಿಯ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಂಭಾಷ ಅವರಿಂದ ವಿಶೇಷ ಉಪನ್ಯಾಸ ಇರಲಿದೆ. ಬಳ್ಳಾರಿಯ ಕುಮಾರಿ ತಸ್ಮಿಯ ಅನ್ನಪೂರ್ಣ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ .ಕೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ .ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಇತರರು ಉಪಸ್ಥಿತರಿರುವರು.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ. ತುಕಾರಾಮ್ ರಾವ್ ಅವರು ಕೋರಿದ್ದಾರೆ.
