Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ನಾಮಕರಣ



ರಾಯಚೂರು ಜೂನ್ 23 ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಿಸಲು ಜೂನ್ 23ರಂದು ರಾಯಚೂರಗೆ ಆಗಮಿಸಿದ್ದ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ರಾಯಚೂರ ತಾಲೂಕಿನ ಯರಗೇರಾ ಗ್ರಾಮದ ಬಳಿಯಲ್ಲಿರುವ ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ ಮತ್ತು ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿದರು. ಇದೆ ವೇಳೆ ಅವರು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಉದ್ಯಾನವನ ಹಾಗೂ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ವಿರೋಧ ಪಕ್ಷದ ನಾಯಕರು ಹಾಗೂ ಸಂಸದರಾದ (ರಾಜ್ಯ ಸಭೆ) ಡಾ.ಮಲ್ಲಿಕಾರ್ಜುನ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಎನ್.ಎಸ್. ಭೋಸರಾಜು ಸೇರಿದಂತೆ ವಿವಿಧ ಸಚಿವರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ ನಾಯಕ ಸೇರಿದಂತೆ ಇನ್ನೀತರ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ಡೆ, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸುಯಯೀಂದ್ರ ಕುಲಕರ್ಣಿ, ಕುಲಸಚಿವರಾದ ಡಾ.ಚನ್ನಪ್ಪ ಎ., ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಇನ್ನೀತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ