Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ

ಶಿವಮೊಗ್ಗ ಜೂನ್ 05ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು ಜೂ.5 ರ ಸಂಜೆ 5 ಗಂಟೆಗೆ 'ಮಾಕ್ ಡ್ರಿಲ್' (ಅಣಕು ಪ್ರದರ್ಶನ) ಆಯೋಜಿಸಲಾಗಿದೆ. ಇದು ಕೇವಲ ಮುನ್ನೆಚ್ಚರಿಕೆ ಮತ್ತು ತರಬೇತಿಯ ಪ್ರದರ್ಶನವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗಬಾರದು ಎಂದು ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ ತಿಳಿಸಿದ್ದಾರೆ.
ಗುರುವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಕುರಿತು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನದ ಪೂರ್ವಭಾವಿ ಸಿದ್ದತೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ.
ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು ಮತ್ತು ವಿವಿಧ ಇಲಾಖೆಗಳು ಹೇಗೆ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ.
ಈ ಅಣಕು ಪ್ರದರ್ಶನವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗೃಹರಕ್ಷಕದಳ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ನಾಗರೀಕ ರಕ್ಷಣಾ ಸ್ವಯಂ ಸೇವಕರು, ಗೃಹರಕ್ಷಕರು, ಎನ್‌ಸಿಸಿ ಹಾಗೂ ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಯಲಿದೆ.
ಸೈರನ್ ಮೊಳಗಿಸುವಿಕೆ : ಸಾರ್ವಜನಿಕರು ಗಾಬರಿಯಾಗಬೇಡಿ
ವೈಮಾನಿಕ ದಾಳಿಯ ಮುನ್ಸೂಚನೆ ನೀಡುವ 2 ನಿಮಿಷಗಳ ಸೈರನ್ ಮೊಳಗಿಸಲಾಗುವುದು. ಸೈರನ್ ಸದ್ದು ಕೇಳಿದ ತಕ್ಷಣ ನಾಗರಿಕರು ಗಾಬರಿಯಾಗಬಾರದು.ಇದು ಕೇವಲ ತರಬೇತಿಯ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಹಮ್ಮಿಕೊಳ್ಳಲಾಗಿದೆ.
ತಾಲೀಮಿನ ಸಂದರ್ಭದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ವಾಹನಗಳು ಹಾಗೂ ಆಂಬ್ಯುಲೆನ್ಸ್ಗಳ ಸಂಚಾರ ಇರಲಿದೆ, ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತರಿಸುವುದು, ಹುಡುಕಾಟ ಮತ್ತು ರಕ್ಷಣೆ ಹಾಗೂ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸುವ ಪ್ರದರ್ಶನವಿರುತ್ತದೆ ಎಂದರು.
ನಗರದಲ್ಲಿ ನಡೆಯಲಿರುವ ಈ ತಾಲೀಮು ಕೇವಲ ನಾಗರಿಕರ ಸುರಕ್ಷತೆ ಮತ್ತು ಜಾಗೃತಿಗಾಗಿ ಹಮ್ಮಿಕೊಂಡಿರುವ ಸಾಂಪ್ರದಾಯಿಕ ಸಿದ್ಧತೆಯಾಗಿದ್ದು ಸಾರ್ವಜನಿಕರು ಸಹ ವೀಕ್ಷಿಸಲು ಭಾಗವಹಿಸಬಹುದು ಎಂದು ತಿಳಿಸಿದರು.
ಎಎಸ್‌ಪಿ ಕಾರಿಯಪ್ಪ ಮಾತನಾಡಿ, ವಿವಿಧ ಇಲಾಖೆಗಳು, ಸಂಸ್ಥೆಗಳಿಗೆ ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಸಂಬಂಧಿಸಿದವರು ನಿರ್ವಹಿಸಬೇಕು. ಅಣಕು ಪ್ರದರ್ಶನ ವೇಳೆ ಯಾರಿಗೂ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ಅಣಕು ಪ್ರದರ್ಶನದಲ್ಲಿ ವೈಮಾನಿಕ ದಾಳಿ, ದಾಳಿಯಿಂದ ಹಾನಿಗೊಳಗಾದ ಗುಡಿಸಲು, ರಕ್ಷಣೆಗೆ ಅಗತ್ಯವಾದ ಅಗ್ನಿ ಶಾಮಕ ದಳ, ರಕ್ಷಣಾ ಪಡೆ, ಆಂಬುಲೆನ್ಸ್ , ಆಸ್ಪತ್ರೆ, ಕೇಂದ್ರ ಮಾಹಿತಿ ಕೇಂದ್ರ ಹೀಗೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಮತ್ತು ಡ್ರೋನ್ ವಿಡಿಯೋಕರಣ ಸಹ ಮಾಡಲಾಗುವುದು. ಇದು ಕೇವಲ ರಕ್ಷಣಾ ಸಿದ್ದತೆಯ ಪರಿಶೀಲನೆಗಾಗಿ ನಡೆಸುವ ಕೃತಕ ಅಣಕು ಪ್ರದರ್ಶನವಾದ್ದರಿಂದ ಸಾರ್ವಜನಿಕರಲ್ಲಿ ಯಾವುದೇ ರೀತಿಯ ಆತಂಕ ಬೇಡವಾಗಿದ್ದು ಸಾರ್ವಜನಿಕರು ವೀಕ್ಷಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ನಟರಾಜ್ ಕೆ ಎಸ್, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಗೀತಾ, ಡಿಎಸ್‌ಪಿ ಡಿಆರ್ ದಿಲೀಪ್ ಕುಮಾರ್, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಇಲಾಖೆ, ಪಾಲಿಕೆ, ಕೆಎಸ್‌ಆರ್‌ಟಿಸಿ, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ