Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.28 ರಂದು “ಅಂಬೇಡ್ಕರ್ ಓದು” ಕಾರ್ಯಕ್ರಮ

ಬಳ್ಳಾರಿ,ಜು.27
ಕನ್ನಡ ಮತ್ತು ಸಂಸ್ಕೃತಿ ಇಲಾಖೆÀ ವತಿಯಿಂದ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್‌ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಜು.28 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ. ರಾಜ್ ಕುಮಾರ್ ರಸ್ತೆಯ ಸರ್ಕಾರಿ(ಮಾ.ಪು) ಪದವಿ ಪೂರ್ವ ಸಂಯುಕ್ತ ಕಾಲೇಜು ಸಭಾಂಗಣದಲ್ಲಿ “ಅಂಬೇಡ್ಕರ್ ಓದು” ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ವಿ. ಹನುಮಂತ್ ರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಸರ್ಕಾರಿ(ಮಾ.ಪು) ಪದವಿ ಪೂರ್ವ ಸಂಯುಕ್ತ ಕಾಲೇಜು ಪ್ರಾಂಶುಪಾಲರಾದ ಸುಂಕಪ್ಪ .ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಬಳ್ಳಾರಿಯ ಇಂಡೋ ಅಮೇರಿಕನ್ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಬಸವರಾಜ ಅಮಾತಿ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST