Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

ಚಿತ್ರದುರ್ಗಜೂ.11:
ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ 2024ರ ಜನವರಿ 01 ರಿಂದ ಡಿಸೆಂಬರ್ 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಸೇರಿದಂತೆ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಇದೇ ಜೂನ್ 30ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.
ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು, ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕರ್ನಾಟಕ ಜಾನಪದ ಅಡಾಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ