Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಖಾಯಿಲೆ ಪೀಡಿತರ ಆರೈಕೆದಾರರಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ





ಧಾರವಾಡ  ಆ 08: 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯೂಲರ್ ಡಿಸ್ಟ್ರೋಪಿ, ಪಾರ್ಕಿನಸನ್ ಹಾಗೂ ಮಲ್ಟಿಪಲ್ ಸ್ಕೆಲರೊಸಿಸ್ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1000 ಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ವಿಕಲತೆ (ಶ್ರವಣದೋಷ ಹಾಗೂ ದೃಷ್ಟಿದೋಷ ಎರಡನ್ನು ಹೊಂದಿರುವವರು) ಹೊಂದಿರುವ ವಿಕಲಚೇತನರಿಗೆ ವಿಸ್ತರಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.



ಆದ್ದರಿಂದ ಆರೈಕೆದಾರರು ಈ ಯೋಜನೆಯಡಿ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಖಾಯಿಲೆ ಪೀಡಿತರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಡ್ಡಾಯ) ಯನ್ನು ಹೊಂದಿರುವ ಶೇ.75 ಕ್ಕಿಂತ ಹೆಚ್ಚಿನ ವಿಕಲತೆಯನ್ನು ಹೊಂದಿರಿರುವವರು ಅರ್ಜಿ ಸಲ್ಲಿಸಬಹುದು.



ಅರ್ಹರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕಾ ಪಂಚಾಯತ ಹಾಗೂ ಗ್ರಾಮ ಪಂಚಾಯತಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.



ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ