Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಗಾರು ಬೆಳೆ ಸಮೀಕ್ಷೆಗೆ ಖಾಸಗಿ ನಿವಾಸಿಗಳ ಆಪ್ ಬಿಡುಗಡೆ


ಬಳ್ಳಾರಿ,ಜ.02



ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನಲ್ಲಿ ಖಾಸಗಿ ನಿವಾಸಿಗಳು ರೈತರಿಂದ ಬೆಳೆದ ಬೆಳೆಗಳ ಬಗ್ಗೆ ನಿಖರ ಮಾಹಿತಿಯನ್ನು ಮೊಬೈಲ್ ಆಪ್‌ನಿಂದ ದಾಖಲಿಸಲು ಆಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜ.01 ರಿಂದ ಚಾಲನೆಯಾಗಿದೆ. ಖಾಸಗಿ ನಿವಾಸಿಗಳು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ (PR App Crop Survey Rabi 2024-25) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯ, ಬೆಳೆ ಕಟಾವು ಪ್ರಯೋಗ, ಪ್ರಕೃತಿ ವಿಕೋಪ ಸಂದರ್ಭ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿ ಉಪಯೋಗಿಸಲಾಗುತ್ತದೆ.

ಜಿಲ್ಲೆಯಲ್ಲಿ 2,42,520 ಬೆಳೆ ತಾಕುಗಳಿದ್ದು, ಮೊಬೈಲ್ ಆಪ್ ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್ ಡಿಜಿಟೈಜ್‌ಡ್ ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ಎಲ್ಲಾ ಬೆಳೆಗಳ ವಿವರಗಳನ್ನು ಕಡ್ಡಾಯವಾಗಿ ದಾಖಲು ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ