Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ವರ್ಷದ ಬಿ.ಇಡಿ ದಾಖಲಾತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ದಾವಣಗೆರೆ ನ.29 : ಪ್ರಸಕ್ತ ಸಾಲಿನ 2ನೇ ವರ್ಷದ ಬಿ.ಇಡಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation karnataka.gov.in/ ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡನ್ನು ಬಳಸಿ ಡಿಸೆಂಬರ್ 5 ರೊಳಗೆ ನಿಗದಿತ ಶುಲ್ಕದ ಚಲನನ್ನು ಮುದ್ರಿಸಿಕೊಂಡು ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಿ ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ದಾಖಲಾತಿ ಪತ್ರವನ್ನು ಪಡೆದುಕೊಳ್ಳಬೇಕು. ಹಾಗೂ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿಗೆ ಸೇರ್ಪಡೆಗೊಳ್ಳಬೇಕು.

ಮೊದಲ ಸುತ್ತಿನ ಆಯ್ಕೆಯಲ್ಲಿ ಹಂಚಿಕೆಯಾದ ಕಾಲೇಜಿಗೆ ಸೇರಲು ಬಯಸದೇ ಇರುವ ಅಭ್ಯರ್ಥಿಗಳು ಎರಡನೇ ಸುತ್ತು ಎಂದು ಡಿಸೆಂಬರ್ 5 ರೊಳಗೆ ತಮ್ಮ ಅಭಿಮತವನ್ನು ದಾಖಲಿಸಬೇಕು. ಆಯ್ಕೆ ದಾಖಲಿಸದ ಅಭ್ಯರ್ಥಿಗಳನ್ನು ಹೊರತುಪಡಿಸಿ ಎರಡನೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೊದಲ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕನ್ನು ಡಿಸೆಂಬರ್ 8 ರಂದು ಬಿಡುಗಡೆಗೊಳಿಸಲಾಗುವುದು. ಇದರಂತೆ ಮೊದಲ ಪಟ್ಟಿಯಲ್ಲಿ ಸೀಟು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸದ ಎರಡನೇ ಸುತ್ತು ಎಂದು ಅಭಿಮತವನ್ನು ದಾಖಲಿಸಿದ ಅಭ್ಯರ್ಥಿಗಳು ಮತ್ತು ಮತ್ತು ಉಳಿಕೆ ಅಭ್ಯರ್ಥಿಗಳು ಎರಡನೇ ಮತ್ತು ಕೊನೆಯ ಸೀಟು ಹಂಚಿಕೆಗಾಗಿ ಡಿಸೆಂಬರ್ 8 ರಿಂದ 10 ವರೆಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಕಾಲೇಜುಗಳ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಡಯಟ್ ಪ್ರಾಚಾರ್ಯರರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ