Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಮೇ 13

2026-27ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜುಲೈ 01ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಅರ್ಜಿಗಳನ್ನು https://khtigadag.ac.in/Admissionform.pdf ಲಿAಕ್‌ನಲ್ಲಿ ಡೌನ್‌ಲೊಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.15 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.

*ಡಿಪ್ಲೋಮಾ ಕೋರ್ಸ್ಗಳಿಗೆ ಲಭ್ಯವಿರುವ ಸಂಸ್ಥೆಗಳ ವಿವರ:*

ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) - 22 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) - 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) - 03 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) - 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ಸೀಟ್‌ಗಳನ್ನು ಕಾಯ್ದಿರಿಸಲಾಗಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‌ಗಾಗಿ ಕರೆಯಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್‌ನ 1ನೇ ಮಹಡಿಯ ಕೊಠಡಿ ಸಂಖ್ಯೆ 29ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ಅಥವಾ ಮೊ.9902772936, 9844837264 ಮತ್ತು 9901313417 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ