Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಉಚಿತ ದಾಖಲಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ,01

ನಗರದ ಹೊಸಪೇಟೆ ರಸ್ತೆಯಲ್ಲಿರುವ ಬಿ.ಐ.ಟಿ.ಎಂ. ಎಂಜಿನಿಯರಿ0ಗ್ ಕಾಲೇಜ್ ಸಮೀಪದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು (ಅಲ್ಲೀಪುರ) ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ದಾಖಲಾತಿಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ 60 ಮತ್ತು ವಾಣಿಜ್ಯ ವಿಭಾಗಕ್ಕೆ 60 ಸೀಟ್‌ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾದ ಬಾಲಕಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ನಾಗಯ್ಯ ಹಿರೇಮಠ ಅವರು ತಿಳಿಸಿದ್ದಾರೆ.

ಶೇ. 75ರಷ್ಟು ಸೀಟುಗಳು ಅಲ್ಪಸಂಖ್ಯಾತರಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಮೀಸಲಾಗಿದ್ದು, ಉಳಿದ ಶೇ. 25ರಷ್ಟು ಸೀಟುಗಳನ್ನು ಎಸ್.ಸಿ, ಎಸ್.ಟಿ ಮತ್ತು ಓಬಿಸಿ ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಗುತ್ತದೆ. (ವಿಶೇಷ ಚೇತನರಿಗೆ ಶೇ. 4ರಷ್ಟು ಮೀಸಲಾತಿ ಇರಲಿದೆ).

ಅರ್ಜಿ ಸಲ್ಲಿಸಲು http://dom.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ.

*ಅರ್ಹತೆ ಮತ್ತು ದಾಖಲೆಗಳು:*

ಕರ್ನಾಟಕ ರಾಜ್ಯದ ಅಭ್ಯರ್ಥಿಯಾಗಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರಬೇಕು. ಅರ್ಜಿ ಸಲ್ಲಿಸಲು ಅಂಕಪಟ್ಟಿ, ಹಾಲ್ ಟಿಕೆಟ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದ ಅಗತ್ಯವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಲೀಪುರ, ಬಳ್ಳಾರಿ ಅಥವಾ ಮೊ.7349008289, 6360549014, 9901739242, 9886286814, 8971217895 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ