Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 112026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಐಟಿಐ ಪೂರೈಸಿದವರಿಗೆ 4 ತಿಂಗಳ ಸಿ.ಏನ್.ಸಿ. ಆಪರೇಟರ್ – ವರ್ಟಿಕಲ್ ಮಷಿನ್ನಿಂಗ್ ಸೆಂಟರ್, ಡಿಪ್ಲೋಮ /ಬಿ.ಇ ಪೂರೈಸಿದವರಿಗೆ 4 ತಿಂಗಳ ಸಿ ಏನ್ ಸಿ ಪ್ರೋಗ್ರಾಮರ್ /ಪ್ರೊ-ಇ / ಆಟೋ ಕ್ಯಾಡ್/ ಐಓಟಿ, ಎಸ್.ಎಸ್.ಎಲ್.ಸಿ. ಪೂರೈಸಿದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಹಾಗೂ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಮುಗಿದ ನಂತರ ತಾಂತ್ರಿಕ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳಿಗೆ ರೂ. 2500/- ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆಯ ದಾಖಲಾತಿಗಳು ಹಾಗು ವೈಯಕ್ತಿಕ ವಿವರಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ.ಸಿಎ 38,ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/9448307027/ 9449286543 ಗಳನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ