Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ವಿಕಲಚೇತನರ ಆರೈಕೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ"


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.



ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನರು ಅವರ ಆರೈಕೆದಾರರು ಅಗತ್ಯ ದಾಖಲಾತಿಗಳೊಂದಿಗೆ, ವಿಆರ್‌ಡಬ್ಲ್ಯೂ/ಯುಆರ್‌ಡಬ್ಲ್ಯೂ/ಎಂಆರ್ಡಬ್ಲ್ಯೂ/ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿಕಲಚೇತನರ ವಿಶಿಷ್ಟ ಗುರುತಿನ (ಯುಡಿಐಡಿ), ವಿಕಲಚೇತನರ ಆಧಾರ್ ಕಾರ್ಡ್, ಭಾವಚಿತ್ರ (ವಿಕಲಚೇತನರ ಮತ್ತು ಆರೈಕೆದಾರರ), ಆರೈಕೆದಾರರ ಬ್ಯಾಂಕ್ ಪಾಸ್ ಬುಕ್ ಪ್ರತಿ, ಆರೈಕೆದಾರರ ಆಧಾರ್ ಕಾರ್ಡ್.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ