Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೆಫ್ರಿಜರೇಷನ್, ಏರ್ ಕಂಡೀಷನಿಂಗ್ & ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ



ಕೊಪ್ಪಳ ಮಾರ್ಚ್ 17: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಏಪ್ರಿಲ್ ತಿಂಗಳಿನಲ್ಲಿ 30 ದಿನಗಳ ಉಚಿತ ತರಬೇತಿಗಳು ಪ್ರಾರಂಭಿಸಲಾಗುತ್ತಿದ್ದು, ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಸ್ವಯಂ ಉದ್ಯೋಗ ಮಾಡಲು ಈ ತರಬೇತಿಯು ಅನುಕೂಲವಾಗಲಿದ್ದು, 18 ರಿಂದ 50 ವಯಸ್ಸಿನ ಒಳಗಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಈ ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿAದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 8217236973, 9483485489, 9482188780 ಗೆ ಮಾರ್ಚ್ 30 ರೊಳಗಾಗಿ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳೊಂದಿಗೆ ನೋಂದಾಯಿಸಬಹುದಾಗಿದೆ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ