Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ


ಸಿರುಗುಪ್ಪ: ನಗರಸಭೆ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ’ ಯುವ ಸಂಘಗಳನ್ನು ಸ್ಥಾಪಿಸಿ ನೋಂದಣಿ ಮಾಡಿಸಲು ಆಸಕ್ತಿಯುಳ್ಳ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಗಂಗಾಧರ ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಸರಾಸರಿ 8,000 ಜನಸಂಖ್ಯೆಗೆ ಒಂದರಂತೆ ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 9 ಯುವ ಸಂಘಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. 31 ವಾರ್ಡ್‌ಗಳನ್ನು 9 ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ. ಸಂಘಗಳ ಕಾರ್ಯಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ.
ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯಚಟುವಟಿಕೆಗಳಿಗೆ ಸರ್ಕಾರದಿಂದ ₹10 ಲಕ್ಷ ಅನುದಾನ ನೀಡಲಾಗುವುದು. 16ರಿಂದ 35 ವರ್ಷದೊಳಗಿನ ಅದೇ ವಾರ್ಡ್‌ನ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.
ಬಿಜಿವೈಎಸ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ₹10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನಗರ ವ್ಯಾಪ್ತಿಯ ಅರ್ಹ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಪೌರಾಯುಕ್ತರು ಮನವಿ ಮಾಡಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್