ಬಳ್ಳಾರಿ,ಜು.30
ಕುಡತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ 2026-27ನೇ ಸಾಲಿನ ಎಸ್‌ಎಫ್‌ಸಿ ಅನುದಾನದ ಎಸ್‌ಸಿಎಸ್‌ಪಿ, ಟಿಎಸ್‌ಪಿ, ಶೇ.7.25 ಮತ್ತು ಶೇ.5ರ ಯೋಜನೆಗಳಡಿ ವೈಯಕ್ತಿಕ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
*ಸೌಲಭ್ಯಗಳು:*
ಲ್ಯಾಪ್‌ಟಾಪ್ ಖರೀದಿಗಾಗಿ ಸಹಾಯಧನ: ಕುಡತಿನಿ ಪಟ್ಟಣ ವ್ಯಾಪ್ತಿಯಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿAಗ್ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಆರ್ಥಿಕ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 06 ರಂದು ಕೊನೆಯ ದಿನವಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ 7 ದಿನಗಳ ಒಳಗಾಗಿ ಉಚಿತವಾಗಿ ಅರ್ಜಿಯನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
