Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ





ಶಿವಮೊಗ್ಗ: ಫೆಬ್ರವರಿ 11,  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಡಿ.ಬಿ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ,ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ