Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮರಾಠ ಸಮುದಾಯಗಳಿಗೆ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯಗಳ ವಿವರ ; ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಅರ್ಹತೆ; ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬ0ಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ