Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ಚಿತ್ರದುರ್ಗಆ.06:

ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹಧನ, ನಿರಾಮಯ, ಸ್ಪರ್ಧಾಚೇತನ ಯೋಜನೆಗಳಿಗೆ ಜಿಲ್ಲೆಯ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 05 ಅರ್ಜಿ ಸಲ್ಲಿಸಲು ಕೊನೆಯ ದಿನ.

ಈ ಯೋಜನೆಗಳಡಿ ಪ್ರಯೋಜನ ಪಡೆಯಲು ವಿಕಲಚೇತನರು ಕಡ್ಡಾಯವಾಗಿ ರಾಷ್ಠ್ತೀಕೃತ ಬ್ಯಾಂಕ್‌ಗಳಲ್ಲಿ ಆಧಾರ ಕಾರ್ಡ್ ಲಿಂಗ್ ಮಾಡಿಸಿರುವ ಉಳಿತಾಯ ಖಾತೆ ಪುಸ್ತಕ ಪ್ರತಿ ಹಾಗೂ ವೈದ್ಯಕೀಐ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಈ ಯೋಜನೆಗಳ ಅರ್ಜಿ ನಮೂನೆಗಳನ್ನು www.dwdsc.kar.nic.in ವೆಬ್‌ಸೈಟ್‌ನಿಂದ ನೇರವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ, ಗ್ರಾಮ ಪಂಚಾಯಿತಿಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು ಸಂರ್ಪಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ