Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ





ಬಳ್ಳಾರಿ,ಜು.25:

ಕೃಷಿ ಇಲಾಖೆ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಮತ್ತು ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು, ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಅoಡಿಡಿiಜoಡಿ ಮಾದರಿಯಲ್ಲಿ ಸ್ಥಾಪಿಸುವುದು. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್‌ಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು (ಎಫ್‌ಪಿಒ ಗಳನ್ನೊಳಗೊಂಡ0ತೆ) ಭಾಗವಹಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ (ಗರಿಷ್ಟ ರೂ.40 ಲಕ್ಷ ಸಹಾಯಧನ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ ಸಂಘ-ಸAಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ ಎಫ್‌ಪಿಒ ಗಳನ್ನೊಳಗೊಂಡ0ತೆ) ಗರಿಷ್ಠ ಶೇ.70 ರಂತೆ (ಗರಿಷ್ಟ ರೂ.50 ಲಕ್ಷ) ಸಹಾಯಧನ ಪಡೆಯಲು ಅವಕಾಶವಿದೆ.

ಸಂಘ-ಸ0ಸ್ಥೆಗಳು (ಎಫ್‌ಪಿಒ ಗಳನ್ನೊಳಗೊಂಡ0ತೆ), ಟ್ರಸ್ಟ್ಗಳು ಮಾತ್ರ ಕಂಬೈಡ್ ಹಾರ್ವೆಸ್ಟರ್ ಮತ್ತು ಶುಗರ್ ಕೇನ್ ಹಾರ್ವೆಸ್ಟರ್ ಗಳನ್ನು ಒಳಗೊಂಡ “ಕೋಂಬೋ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು “Credit Linked Back Ended Subsidy” ಮುಖಾಂತರ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು/ಸಂಘ-ಸ0ಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ.

ಸಹಕಾರ ಸಂಘಗಳ ನಿಬಂಧನೆಯ0ತೆ, ಕಂಪನಿ ಕಾಯ್ದೆಯಡಿ ನೊಂದಾಯಿಸಿದ ಸಂಘ-ಸ0ಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು ಮತ್ತು ಇತರೆ ಸಂಘ-ಸ0ಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಜಿಲ್ಲೆಯಲ್ಲಿನ ಆಸಕ್ತ ರೈತರು ಸಂಬಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಗೆ ಆಗಸ್ಟ್ 08 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ