Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುಸ್ತಕ ಬಹುಮಾನಕ್ಕೆ ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ


ಬಳ್ಳಾರಿ,ಜು.02



ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ (01.01.2022 ರಿಂದ 31.12.2022 ಹಾಗೂ 01.01.2023 ರಿಂದ 31.12.2023ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅಥವಾ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಆಯ್ಕೆಯಾದ ಪುಸ್ತಕಕ್ಕೆ ರೂ.25 ಸಾವಿರಗಳ ಬಹುಮಾನ ಇರಲಿದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560002, ಇವರಿಗೆ ಜುಲೈ 25 ರೊಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂ.080-22113146 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ