Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್.ಐ.ವಿ ಸೋಂಕು ಕುರಿತು ಜಾಗೃತಿ ಅಗತ್ಯ : ನ್ಯಾ.ದಿವ್ಯಶ್ರೀ.

ಕಾರವಾರ.ಡಿ3:- ಸಮಾಜದಲ್ಲಿ ಹೆಚ್.ಐ.ವಿ ಸೋಂಕು ಪೀಡಿತರೊಂದಿಗೆ ಬೇರೆ ರೋಗಗಳ ಪೀಡಿತರಿಗಿಂತಲೂ ಭಿನ್ನವಾಗಿ ವರ್ತಿಸುವುದಲ್ಲದೇ ಅವರನ್ನು ತಾರತಮ್ಯ ಮಾಡುತ್ತಾರೆ ಇದು ಮಾನವಕುಲಕ್ಕೆ ಅಂಟಿಕೊಂಡ ದೊಡ್ಡ ಕಳಂಕವಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರಿ ಸಿ. ಎಂ ಹೇಳಿದರು.

ಅವರು ಸೋಮವಾರ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವಿಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವೆಗಳ ಪ್ರಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆಸ್ಪತ್ರೆ, ಜಿಲ್ಲಾ ತರಬೇತಿ ಕೇಂದ್ರ, ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸ್ಪರ್ಶ, ಕೂರ ಸಂಸ್ಥೆ, ಶಿವ ಛತ್ರಪತಿ ನರ್ಸಿಂಗ್ ವಿದ್ಯಾಲಯ, ಸುಮತಿ ನಾಯ್ಕ್ ನರ್ಸಿಂಗ್ ವಿದ್ಯಾಲಯ ಸದಾಶಿವಗಡ, ಸಮೂಹ ಸಂರಕ್ಷಾ, ಅಜಾದ ಯುತ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಅನೇಕ ಜನರು ತಮ್ಮ ತಪ್ಪು ಇಲ್ಲದೇ ಅಥವಾ ಅರಿವಿಲ್ಲದೆ ಇಂತಹ ಏಡ್ಸ್ ಕಾಯಿಲೆಗಳಿಗೆ ತುತ್ತಾಗುತ್ತಿದಾರೆ. ಸಮಾಜದಲ್ಲಿ ಹೆಚ್.ಐ.ವಿ ಸೋಂಕು ಪೀಡಿತರು ಹಾಗೂ ಅವರ ಕುಟುಂಬದವರು ಶಿಕ್ಷಣ, ಉದ್ಯೋಗ ಇತರೆ ಕ್ಷೇತ್ರದಿಂದ ವಂಚಿತರಾಗಿದ್ದಾರೆ. ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸೋಂಕು ಪೀಡಿತರನ್ನು ಕಳಂಕ ಎಂದು ಭಾವಿಸದೆ ಆರೈಕೆ ಮಾಡಿ ಅವರಲ್ಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸಿ ಹಾಗೂ ಸೋಂಕು ಪೀಡಿತರನ್ನು ಎಲ್ಲರೂ ಸಮಾನತೆಯಿಂದ ಕಾಣಬೇಕು ಎಂದರು.

ಪ್ರತಿಯೊಬ್ಬರಿಗೆ ಜೀವಿಸುವ ಇರುವ ರೀತಿಯಲ್ಲಿ ಹಾಗೇಯೆ ಆರೋಗ್ಯದ ಹಕ್ಕು ಕೂಡಾ ಇದೆ. ಜೀವನ ಶೈಲಿಯಲ್ಲಿ ಆಹಾರ, ವಿಚಾರ, ಅಲೋಚನೆ ನಡವಳಿಕೆಯಲ್ಲಿ ಸಂಯಮ ಮತ್ತು ಶಿಸ್ತುನ್ನು ಅಳವಡಿಸಿಕೊಂಡಾಗ ರೋಗಗಳು ಬರುವುದನ್ನು ತಡೆಯಲು ಸಾಧ್ಯವಿದೆ ಎಂದರು.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮಾತನಾಡಿ, ವಲಸೆ ಕಾರ್ಮಿಕರು, ಡೈವರ್ಗಳಿಗೆ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಹಾಗೂ ಗರ್ಭಿಣಿ ತಾಯಂದಿರಲ್ಲಿ ಹೆಚ್.ಐ.ವಿ ಸೋಂಕು ಕಂಡು ಬಂದಲ್ಲಿ ಅವರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹಲವು ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗಿದ್ದು, ಅವರಲ್ಲಿ ಸೋಂಕು ದೃಡಪಟ್ಟಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಹಾಗೇ ಜನಿಸುವ ಮಗುವಿಗೂ ಕೂಡ 18 ತಿಂಗಳ ಕಾಲ ಪರೀಕ್ಷೆಗೆ ಒಳಪಡಿಸಿ ಸೋಂಕು ಇಲ್ಲದಿರುವ ಬಗ್ಗೆ ಖಚಿತ ಪಡಿಸಲಾಗುತ್ತದೆ . ಈ ರೋಗವು 90 ರಷ್ಟು ಲೈಂಗಿಕ ಸಂಪರ್ಕ ಹಾಗೂ ಮಾದಕ ವಸ್ತುಗಳನ್ನು ಸೇವನೆ ಮಾಡುವುದರಿಂದ ಹರಡಲಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದರು.

ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ. ಹರ್ಷ ವೆಂಕಟೇಶ್ ಪ್ರಾಸ್ತವಿಕವಾಗಿ ಮಾತನಾಡಿ, ದೇಶ, ರಾಜ್ಯ, ಜಿಲ್ಲೆಯಲ್ಲಿ ಹೆಚ್.ಐ.ವಿ ಗೆ ಒಳಪಟ್ಟಿರುವ ಅಂಕಿ ಅಂಶದ ಬಗ್ಗೆ ಮಾಹಿತಿ ನೀಡಿ, ಸಮಾಜದಲ್ಲಿ ಏಡ್ಸ್ ಸೋಂಕು ಪೀಡಿತರನ್ನು ತಾರತಮ್ಯ, ಕಳಂಕ ದಿಂದ ನೋಡುವುದು, ಯಾವುದೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ನಿರಾಕರಿಸುವುದು, ಪೀಡಿತರ ಅನುಮತಿ ಇಲ್ಲದೇ ಸೋಂಕಿನ ಬಗ್ಗೆ ಇತರರಿಗೆ ಮಾಹಿತಿ ನೀಡಿದ್ದಲ್ಲಿ ಅಂತವರ ವಿರುದ್ದ ಕಾನೂನಾತ್ಮಕವಾಗಿ ದಂಡ ಮತ್ತು ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದರು.

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಜಾಥಾಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮಹಮ್ಮದ್ ಮುಲ್ಲಾ ಚಾಲನೆ ನೀಡಿ ಮಾತನಾಡಿ, ಏಡ್ಸ್ ರೋಗವು ಎಲ್ಲಾ ವಯೋಮಾನದವರಲ್ಲೂ ಕಂಡು ಬರುತ್ತಿದ್ದು, ಇದರ ಬಗ್ಗೆ ಯುವಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಹೇಮಗಿರಿ.ಕೆ ಏಡ್ಸ್ ಕುರಿತು ವಿಶೇಷ ಉಪನ್ಯಾಸ ನೀಡಿದರು ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಹಾಗೂ ಭಂಟ್ಟದೇವ ಜನಪದ ಕಲಾ ತಂಡದಿಂದ ಎಚ್.ಐ.ವಿ ಸೋಕು ಹರಡುವಿಕೆ ಕುರಿತು ನಾಟಕ ಪ್ರದರ್ಶನ ನಡೆಯಿತು.

ಜಿಲ್ಲೆಯಲ್ಲಿ ಎಚ್.ಐ.ವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯ ಮಾಡುತ್ತಿರುವ ಹಳಿಯಾಳದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಧ್ಯಪಕ ಲಕ್ಷ್ಮಣ್ ಕಾಳೆ ಹಾಗೂ ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಟಾ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳಾದ ಸ್ನೇಹ ಉದಯ ನಾಯ್ಕ ಹಾಗೂ ಸಿಂಚನಾ ಜಿ ಭಟ್ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅನ್ನಪೂರ್ಣ ವಸ್ತ್ರದ, ಆರ್ಸಿಎಚ್ ಅಧಿಕಾರಿ ಡಾ. ನಟರಾಜ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿ.ಎಂ ಹೆಗಡೆ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ