ಶಿವಮೊಗ್ಗ, ಸೆ, 02
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ / ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ / ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸರ್ಕಾರಿ ಆದೇಶಗಳ ಮಾಹಿತಿಗಾಗಿ https://bcwd.karnataka.gov.in ತಾಣವನ್ನು ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ 8050770004, ರಾಜ್ಯ ಸಹಾಯವಾಣಿ ಸಂಖ್ಯೆ 1902 ಅಥವಾ ಇ-ಮೇಲ್ ವಿಳಾಸಗಳಾದ [email protected] ಹಾಗೂ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ