ಸಿರುಗುಪ್ಪ: ತೆಕ್ಕಲಕೋಟೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್, ಸಿರುಗುಪ್ಪ ಇವರ ಸಹಯೋಗದಲ್ಲಿ ಬಲಕುಂದಿ ಗ್ರಾಮದಲ್ಲಿ ಬಾಲಮೇಳ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ್ ಜಿ ಅವರು ಉಪಸ್ಥಿತರಿದ್ದು, ಮಕ್ಕಳ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿವೆ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.ಮಕ್ಕಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಕಲಿಕಾ ಆಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಬಾಲಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.