Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: 406 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ಜಪ್ತಿ, 3 ಪ್ರಕರಣ ದಾಖಲು

ಬಳ್ಳಾರಿ,ಮೇ 29
ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಸಾಗಾಣಿಕೆ ಮಾಡುತ್ತಿದ್ದ ಜಾಲದ ವಿರುದ್ಧ ತೀವ್ರ ನಿಗಾ ವಹಿಸಿದ್ದು, ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ಕಿ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಕೆ.ಆರ್ ದೇವರಾಜ್ ಅವರು ತಿಳಿಸಿದ್ದಾರೆ.
ಮೇ 27 ರಂದು ಜಿಲ್ಲೆಯ ಮೂರು ಪ್ರತ್ಯೇಕ ಕಡೆಗಳಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ (ಇ.ಸಿ ಕಾಯ್ದೆ) ಪ್ರಕರಣಗಳನ್ನು ದಾಖಲಿಸಲಾಗಿದೆ.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ನಂದಿ ಲೇಔಟ್‌ನಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಲಾರಿಗೆ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೆ.ಎ-36/ಸಿ-5899 ಸಂಖ್ಯೆಯ ಲಾರಿ ಹಾಗೂ ಅದರಲ್ಲಿದ್ದ 226 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕುರುಗೋಡು ನಿವಾಸಿಗಳಾದ ಯರಿಸ್ವಾಮಿ, ಉಮಾಶಂಕರ್, ಮಾನ್ವಿ ತಾಲೂಕಿನ ವೀರಭದ್ರಪ್ಪ, ಚಾಲಕ ವಿನೋದ್ ಹಾಗೂ ಲಾರಿ ಮಾಲೀಕ ಪಂಪನಗೌಡ ಎಂಬುವವರ ವಿರುದ್ಧ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿರುಗುಪ್ಪ ತಾಲ್ಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಮಾರುತಿ ಓಮಿನಿ ವಾಹನ (ಸಂಖ್ಯೆ: ಕೆ.ಎ-34/ಎನ್-7709) ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಲಾಗಿದ್ದು, ವಾಹನ ಸೇರಿದಂತೆ 150 ಕ್ವಿಂಟಾಲ್ ಅಕ್ಕಿಯನ್ನು ಸಿರುಗುಪ್ಪ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ ತಾಲ್ಲೂಕಿನ ಚೆಳಗುರ್ಕಿ ಗ್ರಾಮದಲ್ಲಿ ಕಾರ್ಡುದಾರರಿಂದ ಅಕ್ರಮವಾಗಿ ಸಂಗ್ರಹಿಸಿ ಸಾಗಿಸುತ್ತಿದ್ದ 30 ಕ್ವಿಂಟಾಲ್ ಅಕ್ಕಿ ಮತ್ತು ಸಾಗಾಣಿಕೆಗೆ ಬಳಸಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪಿ.ಡಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮೂರೂ ಕಾರ್ಯಾಚರಣೆಗಳಲ್ಲಿ ಒಟ್ಟು 406 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಲಾಗಿದ್ದ 3 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳ ಅಂದಾಜು ಒಟ್ಟು ಮೌಲ್ಯ ರೂ.14,33,800 ಆಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ರಮ ದಂಧೆಕೋರರ ವಿರುದ್ಧ ಇಲಾಖೆಯು ಕಠಿಣ ಕ್ರಮ ಮುಂದುವರಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ