Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆ

ಬಳ್ಳಾರಿ,ಜೂ.06
ಪರಿಸರವನ್ನು ಉಳಿಸಿ, ಬೆಳೆಸಿ ಹಾಗೂ ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗಪ್ರಭು ಅವರು ಕರೆ ನೀಡಿದರು.
ಅರಣ್ಯ ಇಲಾಖೆಯ ಬಳ್ಳಾರಿ ಪ್ರಾದೇಶಿಕ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ “ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಘೋಷವಾಕ್ಯದೊಂದಿಗೆ ಗುರುವಾರ ನಗರದ ತಾಳೂರು ರಸ್ತೆಯಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಟ್ಟು ನಿರೂಣಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಪರಿಸರ ಮಾಲಿನ್ಯ ತೀವ್ರಗೊಳ್ಳುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪ್ರತಿಯೊಬ್ಬ ನಾಗರಿಕನೂ ಕಡ್ಡಾಯವಾಗಿ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅಭಿಪ್ರಾಯಪಟ್ಟರು.
ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಕೃತಿಯನ್ನು ಸಮತೋಲನದಲ್ಲಿಡಬೇಕು. ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳ ಬಳಕೆಯನ್ನು ಕಡಿಮೆ ಮಾಡಿ, ಅವುಗಳನ್ನು ವೈಜ್ಞಾನಿಕ ಹಾಗೂ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು ಮುಖ್ಯವಾಗಿದೆ. ನೈಸರ್ಗಿಕ ಇಂಧನ ಸಂಪನ್ಮೂಲಗಳನ್ನು ಮಿತವಾಗಿ ಬಳಸಿ, ಭವಿಷ್ಯದ ಪೀಳಿಗೆಗೆ ಉಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದರು.
ಮುಂದಿನ ಪೀಳಿಗೆಗೆ ಉತ್ತಮ ಮತ್ತು ಆರೋಗ್ಯಕರ ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರು ಪರಿಸರ ಜಾಗೃತಿ ಮೂಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್.ಎ ಮೋಹನ್ ಅವರು ಮಾತನಾಡಿ, ಮಾನವನ ಹಸ್ತಕ್ಷೇಪ ಹಾಗೂ ನಗರೀಕರಣದಿಂದಾಗಿ ಪರಿಸರವು ದಿನೇ ದಿನೇ ನಾಶವಾಗುತ್ತಿದೆ. ನಾವು ಚಿಕ್ಕವರಿದ್ದಾಗ ಕಾಲುವೆಗಳಲ್ಲಿ ಶುದ್ಧವಾದ ಕುಡಿಯುವ ನೀರು ಸಿಗುತ್ತಿತ್ತು. ಆದರೆ ಇಂದು ಕೈಗಾರಿಕೀಕರಣ ಹಾಗೂ ಮಾನವನ ಬೇಜವಾಬ್ದಾರಿತನದಿಂದಾಗಿ ನಮಗೆ ಶುದ್ಧವಾದ ಗಾಳಿ ಮತ್ತು ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಸರ್ಕಾರ ಅಥವಾ ಇಲಾಖೆಗಳು ಮಾತ್ರ ಪರಿಸರ ಕಾಳಜಿ ವಹಿಸಿದರೆ ಸಾಲದು; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನೂ ಪರಿಸರ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಅವರು ಮಾತನಾಡಿ, ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪರೀತ್ಯದ ಈ ಕಾಲಘಟ್ಟದಲ್ಲಿ ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಕೆಲಸವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಪ್ರಸ್ತುತ ಜಗತ್ತು ಪರಿಸರ ಮಾಲಿನ್ಯದಿಂದಾಗಿ ಕಠಿಣ ಹಂತವನ್ನು ಎದುರಿಸುತ್ತಿದ್ದು, ಪ್ರಕೃತಿಯನ್ನು ರಕ್ಷಿಸಲು ತಕ್ಷಣದ ಕ್ರಮಗಳು ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಪ್ರಿಯಾಂಕ ಟಿ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿದ್ಧಲಿಂಗಯ್ಯ ಗಂಗಾಧರಮಠ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ದೇವರೆಡ್ಡಿ, 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ವಿನುತಾ ಬಿ.ಎಸ್., 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಲಕ್ಷಿö್ಮ ಭವಾನಿ ಶಂಕ್ರಪ್ಪ, ಅರಣ್ಯ ಇಲಾಖೆಯ ಅಧಿಕಾರಿ ದಾನನಗೌಡ ವಿ.ಪಾಟೀಲ್ ಸೇರಿದಂತೆ ನ್ಯಾಯಾಂಗ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಇದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ