Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಾತಿ ಆರಂಭ


ಬಳ್ಳಾರಿ,ಮೇ 05

ನಗರದ ಹೊಸಪೇಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜಿನಲ್ಲಿ ಲಭ್ಯವಿರುವ ಆಟೋಮೊಬೈಲ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟಾçನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟಿçಕಲ್ ಅಂಡ್ ಎಲೆಕ್ಟಾçನಿಕ್ಸ್, ಮೆಕ್ಯಾನಿಕಲ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿ0ಗ್ ವಿಭಾಗಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.

*ವೇಳಾಪಟ್ಟಿ:*

ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಂದು ಸಂಜೆ 06 ಗಂಟೆಯ ನಂತರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಮೇ 18 ರ ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಮೆರಿಟ್ ಪಟ್ಟಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಂಜೆ 06 ಗಂಟೆಯ ನಂತರ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ.

ಮೇ 22 ರಂದು ಸಂಜೆ 05.30 ಗಂಟೆಯ ನಂತರ ಸೀಟು ಹಂಚಿಕೆ ವಿವರಗಳ ಪ್ರಕಟಿಸಲಾಗುವುದು. ಮೇ 23 ರಿಂದ ಮೇ 25 ರವರೆಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅವಧಿ ಹಾಗೂ ಮೇ 26 ರಿಂದ ಮೇ 30 ರವರೆಗೆ ಕಾಲೇಜು ಮಟ್ಟದಲ್ಲಿ ಮೆರಿಟ್ ಮತ್ತು ರೋಸ್ಟರ್ ಆಧಾರದ ಖಾಲಿ ಉಳಿದ ಸೀಟುಗಳಿಗೆ ಆಫ್‌ಲೈನ್ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಾಲೇಜು ಪಾಲಿಟೆಕ್ನಿಕ್ ಕಚೇರಿ ಅಥವಾ ದೂ.08392-294371 ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ