Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಸರ್ಕಾರಿ ಕಿವುಡು ಮಕ್ಕಳ ವಸತಿಯುತ ಶಾಲೆಗೆ ಉಚಿತ ದಾಖಲಾತಿ ಪ್ರಾರಂಭ


ಬಳ್ಳಾರಿ,ಮೇ 03

ನಗರದ ಕಂಟೋನ್ಮೆoಟ್ ಪ್ರದೇಶದ ಶಾಂತಿಧಾಮ ಆವರಣದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 1ರಿಂದ 10ನೇ ತರಗತಿಯವರೆಗೆ ಶ್ರವಣದೋಷವುಳ್ಳ ಬಾಲಕರಿಗೆ ಉಚಿತ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ.

*ಅರ್ಹತೆ:*

6 ವರ್ಷದಿಂದ 14 ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳು ಪ್ರವೇಶ ಪಡೆಯಬಹುದು. ಕೇವಲ ಬಾಲಕರಿಗೆ ಮಾತ್ರ ಈ ಶಾಲೆಯಲ್ಲಿ ಅವಕಾಶವಿರುತ್ತದೆ. ವಸತಿ ಮತ್ತು ಊಟ, ಶಿಕ್ಷಣ, ವಿಶೇಷ ಶಿಕ್ಷಕರಿಂದ ವಿಷಯ ಬೋಧನೆ, ಪಠ್ಯಪುಸ್ತಕ ಹಾಗೂ ಸಮವಸ್ತç, ಮಾತಿನ ತರಬೇತಿ, ಶ್ರವಣ ತರಬೇತಿ, ಭಾಷಾ ಕಲಿಕೆ ಮತ್ತು ಕಂಪ್ಯೂಟರ್ ಶಿಕ್ಷಣ, ಸ್ಮಾರ್ಟ್ ಕ್ಲಾಸ್ ಮತ್ತು ಸೈನ್ಸ್ ಲ್ಯಾಬ್ ಸೌಲಭ್ಯ, ಪಥಸಂಚಲನ, ಸಾಮೂಹಿಕ ನೃತ್ಯ, ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ತರಬೇತಿ ಸೇರಿದಂತೆ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಮೇಲ್ಕಂಡ ಸೌಲಭ್ಯಗಳನ್ನು ನೀಡಲಾಗುವುದು.

ಅರ್ಜಿಗೆ ಬೇಕಾಗಿರುವ ದಾಖಲೆಗಳು:

ಜಾತಿ ಮತ್ತು ಆದಾಯ ಪ್ರಮಾಣಪತ್ರ, ಜನ್ಮ ದಿನಾಂಕ ಪ್ರಮಾಣಪತ್ರ, ವಿದ್ಯಾರ್ಥಿ ಹಾಗೂ ತಂದೆ-ತಾಯಿಯ ಆಧಾರ್ ಕಾರ್ಡ್ ಪ್ರತಿ, ಅಂಗವಿಕಲ ಪ್ರಮಾಣ ಪತ್ರ ಹಾಗೂ ಯು.ಡಿ.ಐ.ಡಿ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆoಟ್ ಪ್ರದೇಶದ ಶಾಂತಿಧಾಮ ಆವರಣದಲ್ಲಿರುವ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138, ಮೊ.9008485380, 9902106670 ಗೆ ಸಂಪರ್ಕಿಸಬಹುದಾಗಿದೆ ಎಂದು ಸೂಚಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ