Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ | ರಾಜ್ಯ ಸುದ್ದಿ

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶ: ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ

ಬಳ್ಳಾರಿ,ಸೆ.08
ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವತಿಯಿಂದ ಬೃಹತ್ ಸಾರ್ವಜನಿಕ ಸಮಾವೇಶ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಕಾರ್ಯಕ್ರಮದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಸಂಘಟಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದಾದ್ಯಂತ ಎಲ್ಲೆಂದರಲ್ಲಿ ಬ್ಯಾನರ್, ಫ್ಲೆಕ್ಸ್ ಅಥವಾ ಕಟೌಟ್‌ಗಳನ್ನು ಅಳವಡಿಸುವಂತಿಲ್ಲ. ಕೇವಲ ಕಾರ್ಯಕ್ರಮ ನಿಗದಿಯಾಗಿರುವ ಮುನ್ಸಿಪಲ್ ಹೈಸ್ಕೂಲ್ ಮೈದಾನದ ಆವರಣದಲ್ಲಿ ಮಾತ್ರ ಬ್ಯಾನರ್ ಹಾಕಲು ಅನುಮತಿ ನೀಡಲಾಗಿದೆ.
ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗಬಾರದು. ಒಂದು ವೇಳೆ ನಷ್ಟ ಸಂಭವಿಸಿದರೆ ಸಂಘಟಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.
ಸಭೆಗೆ ಆಗಮಿಸುವ ಕಾರ್ಯಕರ್ತರ ವಾಹನಗಳಿಂದ ಸಾರ್ವಜನಿಕರ ದಿನನಿತ್ಯದ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು.
ನಿಗದಿತ ಡೆಸಿಬಲ್ ಮಿತಿಯೊಳಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬೇಕು ಹಾಗೂ ಅನುಮತಿಸಲಾದ ಸಮಯದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಿದೆ.
ಜಿಲ್ಲಾಡಳಿತ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶ: ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಶ್ರೀಕ್ಷೇತ್ರ ಹುಲಿಗಿಯಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಸಂಭ್ರಮ ----ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ- ಎಡಿಸಿ ಮಹಮ್ಮದ್ ಝುಬೇರ್ ಸೂಚನೆಪಡಿತರ ಪಡೆಯುವ ಪ್ರತಿಯೋಬ್ಬರು ಇ-ಕೆವೈಸಿ ಮಾಡಿಸಲು ಸೆ.30 ರಂದು ಕೊನೆಯ ದಿನಖಾಸಗೀಕರಣದಿಂದ ಶಿಕ್ಷಣ ವ್ಯವಸ್ಥೆಗೆ ತೊಂದರೆ; ಡಾ ನುಗಡೋಣಿಬಲಕುಂದಿಯಲ್ಲಿ ‘ಎಂತ ಮಹಿಮಾನಿತ ಗೊಳ್ಯದ ಗಾದಿಲಿಂಗಪ್ಪ ತಾತನವರ’ ನಾಟಕ ಪ್ರದರ್ಶನ. ಐದು ಗುಡಿ ಲಿಂಗೇಶ್ವರ ಹಬ್ಬದ ಅಂಗವಾಗಿ ಭಕ್ತಿ ಸಂಭ್ರಮ; ಕಲಾವಿದರಿಗೆ ಸನ್ಮಾನಬಳ್ಳಾರಿ ಶಾಸಕದ್ವಯರಿಂದ ಪ್ರಜಾಸೇವಾ ಇಲಾಖೆ ಕುರಿತು ಶ್ಲಾಘನೆ ಪ್ರಜಾಸೇವಾ ಆಂದೋಲನ ಸಭೆ ಇಡೀ ದೇಶಕ್ಕೆ ಮಾದರಿಯಾಗಲಿದೆನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆಸಂಶೋಧನೆಯಲ್ಲಿ ವಿಭಿನ್ನತೆ ಕುಂಠಿತ: ಪ್ರೊ.ಪಿ.ಎಲ್ ಧರ್ಮ ಅಭಿಪ್ರಾಯಭದ್ರಾ ಮೇಲ್ದಂಡೆ ಯೋಜನೆ - ನದಿ ಪಾತ್ರದ ಜನರಿಗೆ ಎಚ್ಚರಿಕೆ