Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ,ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ

ಬಳ್ಳಾರಿ: ಜೂ  18  ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ,ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿ ಕಾರ್ಯಕರ್ತರು,ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.


ನಗರದ ಈಡಿಗ ಹಾಸ್ಟೆಲ್ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದ್ವಿಚಕ್ರ ವಾಹನಗಳ ಶವಯಾತ್ರೆ ಮಾಡುವ ಮೂಲಕ ಸರ್ಕಾರದ ವಿರುದ್ದ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.






ಸುಮಾರು ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ರಾಯಲ್ ವೃತ್ತದ ಬಳಿ ದ್ವಿಚಕ್ರ ವಾಹನ ಹಾಗೂ ಎತ್ತಿನ ಬಂಡಿಗಳ ಮೂಲಕ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಡಿಸಿ ಕಚೇರಿಗೆ ತೆರಳಿದ ಕಾರ್ಯಕರ್ತರು, ಮುಖಂಡರು ನಾನಾ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ ಅವರು ಮಾತನಾಡಿ,ಸಿ.ಎಂ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಮುಂದುವರೆಸಲು ಪೆಟ್ರೋಲ್, ಡಿಸೇಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಜನರ ನೆಮ್ಮದಿ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ.ಸರ್ಕಾರದ ಈ ಕ್ರಮ ಸರಿಯಲ್ಲ,ಕೂಡಲೇ ಸರ್ಕಾರ ಪೆಟ್ರೋಲ್,ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು, ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಬಿಜೆಪಿ ಯುವ ಘಟಕದ ಜಿಲ್ಲಾಧ್ಯಕ್ಷ ಎಂ.ಎಸ್.ಸಿದ್ದಪ್ಪ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ಐನಾಥ್ ರೆಡ್ಡಿ,ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ, ಹನುಮಂತ,ಸುರೇಖಾ ಎಸ್.ಮಲ್ಲನಗೌಡ,ಮಹಿಳಾ ಘಟಕದ ಸುಮಾ ರೆಡ್ಡಿ,ಸುಗುಣ, ರಾಜ್ಯ ಕಾರ್ಯಕಾರಿ ಸದಸ್ಯೆ ವಿಜಯಲಕ್ಷ್ಮಿ,ಕೆ.ರಾಮಲಿಂಗಪ್ಪ, ರಾಮಂಜಿನಿ,ಮಲ್ಲನಗೌಡ, ಡಾ. ಮಹಿಪಾಲ,ವಿರೂಪಾಕ್ಷ ಗೌಡ, ಅಡವಿಸ್ವಾಮಿ,ಕೆ.ಮಲ್ಲೇಶ್ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ