Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಂತರರಾಷ್ಟ್ರೀಯ ಸುದ್ದಿ

ನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ

​ಬಳ್ಳಾರಿ,ಸೆ.05
ನೇಪಾಳ ಮತ್ತು ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಉಂಟಾದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹದಲ್ಲಿ ಕಾಣೆಯಾಗಿರುವ ಕರ್ನಾಟಕದ ಸಂತ್ರಸ್ತರ ಪ್ರಥಮ ಹಂತದ ರಕ್ತಸಂಬಂಧಿಗಳ (First-degree relatives) ಗುರುತು ಪತ್ತೆ ಹಚ್ಚಲು ಮತ್ತು ಡಿಎನ್‌ಎ (DNA) ಮಾದರಿ ಸಂಗ್ರಹಕ್ಕಾಗಿ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು 'ನೋಡಲ್ ಕೇಂದ್ರ'ವನ್ನಾಗಿ ನಿಯೋಜಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಮತ್ತು ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
​ನೇಪಾಳದಲ್ಲಿ ಪತ್ತೆಯಾಗಿರುವ ಮೃತದೇಹಗಳ ಗುರುತು ಪತ್ತೆಹಚ್ಚಲು ಮತ್ತು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ನೇಪಾಳ ಸರ್ಕಾರ ಹಾಗೂ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದೆ.
ನೇಪಾಳದಲ್ಲಿ ಸದ್ಯ ಫೋಟೋ ಹಾಗೂ ಇತರ ವಿವರಗಳಿಂದ ಗುರುತು ಹಿಡಿಯಲಾಗದ ಮೃತದೇಹಗಳ ಡಿಎನ್‌ಎ ಪ್ರೊಫೈಲ್ ತಯಾರಿಸಲಾಗುತ್ತಿದ್ದು, ಅದನ್ನು ಪರಿಶೀಲಿಸಲು ಸಂತ್ರಸ್ತರ ರಕ್ತಸಂಬಂಧಿಗಳ ಡಿಎನ್‌ಎ ಮಾದರಿಯ ಅಗತ್ಯವಿದೆ.
*​ಆಸ್ಪತ್ರೆಯ ನೋಡಲ್ ಅಧಿಕಾರಿಗಳ ವಿವರ:*
ಡಿಎನ್‌ಎ ಮಾದರಿ ಸಂಗ್ರಹ ಮತ್ತು ಸಂಬಂಧಿಕರ ಪರಿಶೀಲನೆಗಾಗಿ ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ​ಡಾ. ನಾಗೇಶ್ ಕುಪ್ಪಸ್ಟ್‌ (ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರು) ಮೊಬೈಲ್ ಸಂ. 9742707500 ಮತ್ತು ಡಾ. ವಾಡಿರಾಜ್ ಬಿ. ಪೊಕ್ಕನ್ (ಆರ್.ಎಮ್.ಒ) - ಮೊಬೈಲ್ ಸಂ. 94484086 ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
*ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:*
ನೇಪಾಳದಲ್ಲಿ ಕಾಣೆಯಾದವರ ಪ್ರಥಮ ಹಂತದ ಸಂಬಂಧಿಕರು (ತಂದೆ, ತಾಯಿ, ಮಗ, ಮಗಳು ಅಥವಾ ಸಂಗಾತಿ) ಡಿಎನ್‌ಎ ಪರೀಕ್ಷೆಗೆ ಆಗಮಿಸುವಾಗ ತಮ್ಮ ಇತ್ತೀಚಿನ ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಸರ್ಕಾರದಿಂದ ನೀಡಲಾದ ಗುರುತಿನ ಚೀಟಿ (ಉದಾಹರಣೆಗೆ ಆಧಾರ್ ಕಾರ್ಡ್) ಹಾಗೂ ಸಂಬಂಧವನ್ನು ಸಾಬೀತುಪಡಿಸುವ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಜಿಲ್ಲಾಡಳಿತ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಪರಿಶೀಲಿಸಲ್ಪಟ್ಟ ನಂತರ ಈ ಮಾದರಿಗಳನ್ನು ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿ, ನಂತರ ನೇಪಾಳದ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಕಾಣೆಯಾದವರ ಬಗ್ಗೆ ಮಾಹಿತಿ ನೀಡಲು ಅಥವಾ ನೆರವು ಪಡೆಯಲು ಕೆಎಸ್‌ಡಿಎಮ್‌ಎ ಹೆಲ್ಪ್‌ಲೈನ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ