Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ,ಜು.27
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಬ್ರಾಹ್ಮಣ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಕನಿಷ್ಠ ರೂ.1.00 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ವರೆಗೆ ಆರ್ಥಿಕ ಸಾಲವನ್ನು ನೀಡಲಾಗುತ್ತದೆ.
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ ರೂ.20,000 ಸಹಾಯಧನ ಮತ್ತು ಸಾಲ ರೂ.80,000, ಸಾಲ ಮರು ಪಾವತಿ 34 ಕಂತುಗಳಲಿ )
ದೊಡ್ಡ ಪ್ರಮಾಣದ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.2 ಲಕ್ಷ ಇದರಲ್ಲಿ ರೂ.40,000 ಸಹಾಯಧನ ಮತ್ತು ಸಾಲ ರೂ.160,000, ಸಾಲ ಮರು ಪಾವತಿ 34 ಕಂತುಗಳಲ್ಲಿ)  
ಅರ್ಹತೆಗಳು:
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ ಹೊಂದಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವಷÀðದ ಒಳಗಿನವರಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಸಾಲದ ಉದ್ದೇಶವನ್ನು 10 ಪದಗಳಿಗಿಂತ ಕಡಿಮೆ ಇಲ್ಲದಂತೆ, ಸ್ಪಷ್ಟವಾಗಿ ಆನ್ ಲೈನ್ ಅರ್ಜಿಯಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಎನ್‌ಪಿಸಿಐ ರಡಿ ಸೀಡ್ ಆಗಿರಬೇಕು.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ಗೆ ಭೇಟಿ ನೀಡಿ hಣಣಠಿs://ಞsbಜb.ಞಚಿಡಿಟಿಚಿಣಚಿಞಚಿ.gov.iಟಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಂಖ್ಯೆ 17, ಹೊಸ ಡಿಸಿ ಆಫೀಸ್, ಸಿ ಬ್ಲಾಕ್, ಬಳ್ಳಾರಿ ರವರನ್ನು ಸಂಪರ್ಕಿಸಿ ಅಥವಾ ಬಳ್ಳಾರಿ ದೂ.08392-294230, ಮೊ. 8762249230, ಹೊಸಪೇಟೆ ಕಚೇರಿ ದೂ.08392-294230 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST