ಬಳ್ಳಾರಿ,ಅ.29
2026ನೇ ಸಾಲಿನ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಂಬoಧಿಸಿದoತೆ ಪ್ರತಿಷ್ಠಿತ ‘ಸಹಕಾರ ರತ್ನ' ಪ್ರಶಸ್ತಿಗಾಗಿ ಅರ್ಹರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿಯ ಸಹಕಾರ ಕ್ಷೇತ್ರದಲ್ಲಿ ಗಣನೀಯ ಹಾಗೂ ವಿಶೇಷ ಸಾಧನೆ ಮಾಡಿದ ಸಹಕಾರಿಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ತಮ್ಮ ಹೆಸರು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳ ವಿವರ, ಕಾರ್ಯನಿರ್ವಹಣೆಯಲ್ಲಿ ಸಹಕಾರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಹಾಗೂ ವಿಶೇಷ ಸಾಧನೆಗಳ ಸಂಪೂರ್ಣ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸಬೇಕು.
ಭರ್ತಿ ಮಾಡಿದ ಪ್ರಸ್ತಾವನೆಗಳನ್ನು ಅಕ್ಟೋಬರ್ 31 ರೊಳಗೆ ಬಳ್ಳಾರಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ತಲುಪುವಂತೆ ಸಲ್ಲಿಸಬೇಕೆಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also read