Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕೆನರಾ ಬ್ಯಾಂಕ್ ಆರ್‌ಸೆಟಿ ವತಿಯಿಂದ ಉಚಿತ ‘ಕೃಷಿ ಉದ್ಯಮಿ’ ತರಬೇತಿಗೆ ಚಾಲನೆ

ಬಳ್ಳಾರಿ,ನ.05
ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‌ಸೆಟಿ) ಆವರಣದಲ್ಲಿ 13 ದಿನಗಳ ಉಚಿತ ‘ಕೃಷಿ ಉದ್ಯಮಿ’ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ಸದಾಶಿವ ಉಪ್ಪಾರ ಅವರು, ಗುರುವಾರ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ರೈತರು ಹೈನುಗಾರಿಕೆ, ಕೋಳಿ ಸಾಕಾಣಿಕೆ, ಎರೆಹುಳು ಗೊಬ್ಬರ ತೊಟ್ಟಿ ರಚನೆ ಮುಂತಾದ ಪೂರಕ ಚಟುವಟಿಕೆಗಳ ಮೂಲಕ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಇದಕ್ಕೆ ಇಂತಹ ತರಬೇತಿಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಪ್ರತಿ ತಾಲೂಕು ಮಟ್ಟದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಬಿ. ಕೊಳ್ಳೂರುಮಠ ಅವರು ಮಾತನಾಡಿ, ಸಂಸ್ಥೆಯಲ್ಲಿ ತಾಂತ್ರಿಕ ತರಬೇತಿಯೊಂದಿಗೆ ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ ವೃದ್ಧಿ ಹಾಗೂ ಸಂವಹನ ಕೌಶಲ್ಯಗಳ ತರಬೇತಿಯನ್ನೂ ನೀಡುವುದರಿಂದ ಶಿಬಿರಾರ್ಥಿಗಳಿಗೆ ವೃತ್ತಿ ಜೀವನದಲ್ಲಿ ಮುನ್ನಡೆಯಲು ನೆರವಾಗುತ್ತದೆ ಎಂದರು.
ಬಳ್ಳಾರಿಯ ಕೆನರಾ ಬ್ಯಾಂಕ್ ನ ಜಿಲ್ಲಾ ಲೀಡ್ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ಅವರು ವಿವಿಧ ಬ್ಯಾಂಕ್ ಗಳಲ್ಲಿ ಕೃಷಿ ಮತ್ತು ಸ್ವ-ಉದ್ಯೋಗಕ್ಕೆ ಲಭ್ಯವಿರುವ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಹಂಚಿಕೊAಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ಪಂಚಾಯತ್ ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಉಪನ್ಯಾಸಕರಾದ ಜಡೇಪ್ಪ, ಸಿದ್ದಲಿಂಗಮ್ಮ, ಸಂತೋಷ್ ಕುಮಾರ್, ಪರಮೇಶ ಹಾಗೂ ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 35 ಜನ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹಲಕ್ಷ್ಮಿ ಯೋಜನೆ : 3 ಕಂತುಗಳ ಒಟ್ಟು ರೂ. 6000 ಹಣ ಬಿಡುಗಡೆ - ದೀಪಾವಳಿ ಕೊಡುಗೆ : ಸಿ.ಎಸ್. ಚಂದ್ರಭೂಪಾಲ್ಗೃಹಲಕ್ಷ್ಮಿ ಯೋಜನೆ : 3 ಕಂತುಗಳ ಒಟ್ಟು ರೂ. 6000 ಹಣ ಬಿಡುಗಡೆ - ದೀಪಾವಳಿ ಕೊಡುಗೆ : ಸಿ.ಎಸ್. ಚಂದ್ರಭೂಪಾಲ್ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ನಿಷೇಧ – ಕಾರ್ಮಿಕ ಇಲಾಖೆ ಎಚ್ಚರಿಕೆಕೆನರಾ ಬ್ಯಾಂಕ್ ಆರ್‌ಸೆಟಿ ವತಿಯಿಂದ ಉಚಿತ ‘ಕೃಷಿ ಉದ್ಯಮಿ’ ತರಬೇತಿಗೆ ಚಾಲನೆಬಳ್ಳಾರಿ ಜಿಲ್ಲೆಯಾದ್ಯಂತ ನವೆಂಬರ್ ಮಾಹೆಯ ‘ಪ್ರಜಾಸೇವೆ ಆಂದೋಲನ’: ಶಾಸಕರ ನೇತೃತ್ವದಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹಾರ ಸಭೆಗಳುಬಳ್ಳಾರಿಯಲ್ಲಿ ಸಂಭ್ರಮದ 71ನೇ ಕರ್ನಾಟಕ ರಾಜ್ಯೋತ್ಸವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಹಿರಿಯ ನಾಗರಿಕರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮಹಿರಿಯ ನಾಗರಿಕರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ನವೆಂಬರ್ 30 ಕೊನೆಯ ದಿನಬಳ್ಳಾರಿ: ಲಿಡ್ಕರ್ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ