Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕೆಸೆಟ್ ತರಬೇತಿ ಕಾರ್ಯಾಗಾರ

ಬಳ್ಳಾರಿ,ನ.19

ಸತತ ಅಧ್ಯಯನದಿಂದ ಯಶಸ್ಸು ಸಾಧಿಸಲು ಸಾಧ್ಯ ಎಂದು ಜ್ಞಾನ ಬುತ್ತಿ ಸಂಸ್ಥೆಯ ಜೈನಹಳ್ಳಿ ಸತ್ಯನಾರಾಯಣ ಗೌಡ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಮಾರ್ಗದರ್ಶನ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ತರಬೇತಿ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಯಾರಿಗೂ ಹಣ ನೀಡದೇ ಸರ್ಕಾರಿ ಉದ್ಯೋಗ ಪಡೆಯಬಹುದು. ಅದಕ್ಕೋಸ್ಕರ ಪ್ರತಿನಿತ್ಯ ಪತ್ರಿಕೆಗಳನ್ನು ಓದಬೇಕು. ಜ್ಞಾನವಿದ್ದರೆ ಏನನ್ನಾದರೂ ಸಾಧಿಸಬಹುದು. ತರಬೇತಿ ಪಡೆಯಲು ಆಗಮಿಸಿರುವ ವಿದ್ಯಾರ್ಥಿಗಳ ಬದುಕು ಸುಂದರವಾಗಲಿ ಎಂದು ಆಶಿಸಿದರು.
ಮತ್ತೋಬ್ಬ ಅತಿಥಿ ಪ್ರೊ.ಎನ್.ಎನ್.ಪ್ರಹ್ಲಾದ್ ಅವರು ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಅಗಾಧ ಜ್ಞಾನ ಅಡಗಿದ್ದು, ಅದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಮಂತರು ಸಾಧನೆ ಮಾಡಲಾಗಿಲ್ಲ, ಹಲವು ಸಾಧಕರು ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಪೋಷಕರು ಆಸೆ ಈಡೇರಿಸಬೇಕು.
ಓದುವ ಛಲ ಇರಬೇಕು. ನಿಮ್ಮ ಕೆಲಸ ಮಾಡುತ್ತಾ ಮುನ್ನುಗ್ಗಿ ಆಗ ಯಶಸ್ಸು ಕಾಣಲು ಸಾಧ್ಯ. ಚೆನ್ನಾಗಿ ಓದಿ ಉದ್ಯೊಗ ಪಡೆಯಬೇಕು. ಮೂಲಸೌಕರ್ಯ ಬೇಕಾದಲ್ಲಿ ನೇರವಾಗಿ ಸಂಪರ್ಕಿಸಿದರೆ ಈಡೇರಿಸುವೆ ಎಂದು ಭರವಸೆ ನೀಡಿದರು.
ತರಬೇತಿಯಲ್ಲಿ 100 ಕ್ಕೂ ಅಧಿಕ ಕೆ-ಸೆಟ್ ಪರೀಕ್ಷಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಘಟಕದ ನಿರ್ದೇಶಕ ಪ್ರೊ.ಭೀಮನಗೌಡ, ಸಂಯೋಜಕರಾದ ಡಾ.ರಾಜೇಂದ್ರ ಪ್ರಸಾದ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ