Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ


ಬಳ್ಳಾರಿ,ಏ.09

ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊAಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು, ಬುಧವಾರ ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.

ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್‌ಲೈನ್‌ನಲ್ಲಿ ದಾಖಲಿಸಿದರು.

ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.

ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ