Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ರಾಜ್ಯದ 87 ಗಾಂಧಿ ಹೆಜ್ಜೆ ಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ



ಬಳ್ಳಾರಿ,ಅ.03
ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಶುಕ್ರವಾರ ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಅನಾವರಣಗೊಳಿಸಿದರು.
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ “ಗಾಂಧಿ ಭಾರತ” ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ.
ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್.  ಸೇರಿದಂತೆ ಗಾಂಧಿ ಭಾರತ ಸಮಿತಿಯ ಪದಾಧಿಕಾರಿಗಳು,  ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕರು, ಅಪಾರ ಸಂಖ್ಯೆಯ ವಿಧ್ಯಾರ್ಥಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಗಾಂಧಿ ಸ್ಮಾರಕ ಸ್ತಂಭ ಸಿದ್ದಡಿಸಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ ಕುಮಾರ್ ಜಿ.ಸಿ. ನಿರ್ಮಿತಿ ಕೇಂದ್ರದ ಅಭಿಯಂತರರಾದ ರಾಜೀವ್ ಅವರನ್ನು ಸನ್ಮಾನಿಸಿದರು.  ಅಲ್ಲದೇ ಈ ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾದಂತೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಗಿಡ ನೆಟ್ಟು ನೀರೆರದರು.
*ಬೆಂಗಳೂರಿನ ಐತಿಹಾಸಿಕ ಕ್ಷಣ:*
ಮಹಾತ್ಮ ಗಾಂಧೀಜಿಯವರು ತಮ್ಮ ಪತ್ನಿ ಕಸ್ತೂರಬಾ ಅವರೊಂದಿಗೆ 1915ರ ಮೇ 8ರ ಶನಿವಾರದಂದು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಅಂದು ಆಗಿನ ಸರ್ಕಾರಿ ಪ್ರೌಢಶಾಲೆಗೆ (ಇಂದಿನ ಸರ್ಕಾರಿ ಕಲಾ ಕಾಲೇಜು) ಭೇಟಿ ನೀಡಿ, ತಮ್ಮ ರಾಜಕೀಯ ಗುರುಗಳಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು. ಅದರ ನೆನಪಿಗಾಗಿ ಈ ಸಭಾಂಗಣಕ್ಕೆ ಬಾಪೂಜಿ ಅವರ ಹೆಸರು ಇರಿಸಲಾಗಿದ್ದು, ಈಗ ಇದೇ ಆವರಣದಲ್ಲಿ ಮೊದಲ ಗಾಂಧಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ.
*ಆಕರ್ಷಕ ಸ್ಮಾರಕ ಸ್ತಂಭದ ವಿವರ*:
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಸ್ಮಾರಕದ ಆಕರ್ಷಕ ಕಲಾಕೃತಿಯನ್ನು ಸಿದ್ಧಪಡಿಸಿದ್ದು, ಸ್ಮಾರಕವು 10 ಅಡಿ ಎತ್ತರ ಹಾಗೂ 3 1/4 (ಮೂರು ಕಾಲು) ಅಡಿ ಅಗಲದ ಏಕಶಿಲಾ ಗ್ರಾನೈಟ್ ಕಲಾಕೃತಿ ಹೊಂದಿದೆ.
*ವಿನ್ಯಾಸ:* ಸ್ತಂಭದ ಮೇಲ್ಭಾಗದಲ್ಲಿ ನಾಲ್ಕು ಮುಖ ಸಿಂಹವುಳ್ಳ ರಾಷ್ಟಿçÃಯ ಲಾಂಛನ, ಅದರ ಕೆಳಗೆ ಅಶೋಕ ಚಕ್ರ, ಧ್ಯಾನಸ್ಥ ಮಹಾತ್ಮ ಗಾಂಧೀಜಿ, ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳು, ಗಾಂಧೀಜಿಯವರ ಸಹಿ ಹಾಗೂ ಚರಕದ ಚಿತ್ರಣವಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ತಿಳಿಸಿದ್ದಾರೆ.
----------

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ