ನವದೆಹಲಿ: ರಾಜ್ಯದ ಜನರ ಕುಡಿಯುವ ನೀರಿನ ಭದ್ರತೆ, ಮೇಕೆದಾಟು ಮತ್ತು ಮಹದಾಯಿ ಸೇರಿದಂತೆ ವಿವಿಧ ಜಲ ಸಂಪನ್ಮೂಲ ಯೋಜನೆಗಳ ಪ್ರಗತಿ, ಜಲಾಶಯಗಳಲ್ಲಿನ ನೀರಿನ ಸ್ಥಿತಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ಹಾಗೂ ಜಲ ಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಿದರು.
ಸಭೆಯಲ್ಲಿ ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ಜಲ ಯೋಜನೆಗಳ ಪ್ರಸ್ತುತ ಸ್ಥಿತಿಗತಿ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ರಾಜ್ಯದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ಕರ್ನಾಟಕದ ವಿಶೇಷ ಪ್ರತಿನಿಧಿ ಡಾ. ಟಿ.ಬಿ. ಜಯಚಂದ್ರ, ಕರ್ನಾಟಕದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಕಾನೂನು ಮತ್ತು ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
