ಬಳ್ಳಾರಿ,ಅ.15
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಸರ್ಕಾರದ ಬ್ಯಾಂಕಿAಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದ್ದು, ಅರ್ಹರು ನೋಂದಾಯಿಸಿಕೊಳ್ಳಬಹುದಾಗಿದೆ.
ಆಸಕ್ತರು ಅ.19 ರೊಳಗಾಗಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ಎಂ.ಪಿ.ಸದಾಶಿವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.