Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಪತ್ತು ನಿರ್ವಹಣಾ ಅಣಕು ಪ್ರದರ್ಶನಕ್ಕೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ


ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 20  ಅನಿಲ ಸೋರಿಕೆಯಾದಾಗ ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕು ಹಾಗೂ ಪರಿಸ್ಥಿತಿಯನ್ನು ನಿಬಾಯಿಸಬೇಕು ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಅಣಕು ಪ್ರದರ್ಶನವನ್ನು (mock drill) ಹಮ್ಮಿಕೊಳ್ಳಲಾಗಿದ್ದು ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಆಯಾ ಇಲಾಖೆಗೆ ವಹಿಸಿರುವ ಜವಬ್ದಾರಿಯನ್ನು ನಿರ್ವಹಿಸಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್.ಜಿ ರವರು ಸೂಚಿಸಿದರು.



ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಅಣಕು ಪ್ರದರ್ಶನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಗೇಲ್ ಗ್ಯಾಸ್ ಸಂಸ್ಥೆ (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್), ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಇವರ ಸಹಯೋಗದೊಂದಿಗೆ ಡಿಸೆಂಬರ್ 27 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ, ಸರ್ಜಾಪುರ ಮುಖ ರಸ್ತೆಯಲ್ಲಿರುವ ಗೈಲ್ ಗ್ಯಾಸ್ ಲಿಮಿಟೆಡ್ ಎಂಡಿಪಿಇ ಪೈಪ್ಲೈನ್ ಇಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು.



ಅಣಕು ಪ್ರದರ್ಶನ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಹಾಗೂ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.



ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ಕೆ.ನಾಯಕ್, ಗೇಲ್ ಗ್ಯಾಸ್ ಸಂಸ್ಥೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ