Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲಾಟ್ ಖರೀದಿಸಲು ಕೊಟ್ಟ ಹಣವನ್ನು ಮರಳಿ ಗ್ರಾಹಕನಿಗೆ ಕೊಡಲು ಪ್ರುತ್ವಿ ಬಿಲ್ಡರ್ಸ್ ಮತ್ತು ಡೆವಲಪರ್ಸ್‍ಗೆ ಆಯೋಗದ ಆದೇಶ



ಧಾರವಾಡ  ಜು.2: ಬೆಂಗಳೂರಿನ ಯಳಚೆನಹಳ್ಳಿಯ ನಿವಾಸಿ ಪರಶುರಾಮ ಬಿ ಹಾಗೂ ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಸಂದ್ಯಾ ಮೇತ್ರಾಣಿ ಎಂಬುವವರು ಎದುರುದಾರರು ಅಭಿವೃದ್ದಿಪಡಿಸುತ್ತಿರುವ ಗಾಮನಗಟ್ಟಿ ಲೇಔಟ್ನಲ್ಲಿ ಪ್ಲಾಟ್ ನಂ.53 ಮತ್ತು ಪ್ಲಾಟ್ ನಂ.17ನ್ನು ಖರೀದಿಸುವ ಸಲುವಾಗಿ ಮುಂಗಡ ಹಣ ಪಾವತಿಸಿ ಖರೀದಿ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ಬಾಕಿ ಹಣ ಪಡೆದು ಎದುರುದಾರರು ಖರೀದಿ ಪತ್ರ ಮಾಡಿಕೊಡದೇ ದೂರುದಾರರಿಗೆ ಸತಾಯಿಸುತ್ತಿದ್ದರು. ಅಲ್ಲದೆ ದೂರುದಾರರ ಪಾವತಿ ಮಾಡಿದ ಹಣವನ್ನು ಸಹ ಮರಳಿ ಕೊಟ್ಟಿರಲಿಲ್ಲ. ಎದುರುದಾರರ ಅಂತಹ ನಡಾವಳಿಕೆಯಿಂದ ಅವರು ತಮಗೆ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆಂದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:01/02/2025 ರಂದು ದೂರು ಸಲ್ಲಿಸಿದ್ದರು.



ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲಾಟನ್ನು ಕೊಡದೇ ಇರುವುದು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟಿದೆ. ಆ ಬಗ್ಗೆ ಎದುರುದಾರರ ಮಾಲೀಕರಾದ ಶಿವನಗೌಡ ಪಾಟೀಲ ಇವರಿಗೆ ದೂರುದಾರರಿಂದ ಪಡೆದಂತಹ ಮುಂಗಡ ಹಣ ಬಡ್ಡಿ ಲೆಕ್ಕಿ ಹಾಕಿ ಸಂದಾಯ ಮಾಡುವಂತೆ ಆದೇಶಿಸಿದೆ. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಎದುರುದಾರರಿಗೆ ಆಯೋಗ ಆದೇಶಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ