Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 26 ರಂದು ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ ಜಾರಿ



ಕೊಪ್ಪಳ ಜುಲೈ 25: ರಾಜ್ಯದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

*ಪರೀಕ್ಷಾ ಕೇಂದ್ರಗಳ ವಿವರ:* ಕೊಪ್ಪಳ ನಗರದ ಸಾರ್ವಜನಿಕ ಮೈದಾನದ ಹತ್ತಿರದ ಸರ್ಕಾರಿ ಬಾಲಕಿಯರ ಪಿ.ಯು ಕಾಲೇಜು, ಕೊಪ್ಪಳದ ಅಶೋಕ್ ವೃತ್ತದ ಬಳಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಜವಾಹರ ರಸ್ತೆ ಹತ್ತಿರದ ಸರ್ಕಾರಿ ಬಾಲಕರ ಪಿ.ಯು ಕಾಲೇಜು ಸೇರಿ ಈ 3 ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜುಲೈ 26 ರಂದು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿವೆ.

ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ