Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಸು ಸಾಕಾಣಿಕೆ (ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ








ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 18  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 16 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.



ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 04 ಕೊನೆಯ ದಿನವಾಗಿದೆ.



ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9241482541, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ