Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನ

ಶಿವಮೊಗ್ಗ, ಜುಲೈ 07 : ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಮಹಿಳಾ ಅಧಿಕಾರಿ, ಶಿಕ್ಷಕಿ ಮಂಜುಳಾ(50) ಇವರು ಸೋಮವಾರ ಮೃತಪಟ್ಟಿದ್ದು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಭದ್ರಾವತಿ ತಾಲ್ಲೂಕಿನ ಕಲ್ಲಾಪುರ ಬಳಿ ಕೋಡಿ ಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾಗ ಇದ್ದಕ್ಕಿದ್ದಂತೆ ಅವರು ಕುಸಿದು ಬಿದ್ದು ಮೃತಪಟ್ಟಿರುತ್ತಾರೆ. ಮೃತರ ಪಾರ್ಥಿವ ಶರೀರದ ದರ್ಶನ ಪಡೆದು, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.
ಕರ್ತವ್ಯದಲ್ಲಿದ್ದಾಗಲೇ ಮರಣ ಹೊಂದಿದ ಬಿಎಲ್‌ಓ ಅವರ ಕುಟುಂಬಕ್ಕೆ ಸರ್ಕಾರದ ನಿಯಮಾವಳಿಗಳನ್ವಯ ಸಿಗಬೇಕಾದ ಸೌಲಭ್ಯ ಹಾಗೂ ಪರಿಹಾರದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ, ತಹಶೀಲ್ದಾರ್ ಹಾಜರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ - ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ: ರಾಜ್ಯಕ್ಕೆ ಅಪಾರ ನಷ್ಟಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ