Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಇಲಾಖೆ: ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ





ಬಳ್ಳಾರಿ,ಮಾ.21

ಪ್ರವಾಸೋದ್ಯಮ ಇಲಾಖೆಯಿಂದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದಲ್ಲಿ 2ನೇ ಹಂತದಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

*ತರಬೇತಿ ವಿವರ:*

ಆಹಾರ ಮತ್ತು ಪಾನೀಯ ಸೇವಾ ವ್ಯವಸ್ಥಾಪಕ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. 20 ರಿಂದ 45 ವರ್ಷದೊಳಗಿನವರಾಗಿರಬೇಕು. (ನಾಲ್ಕು ತಿಂಗಳ ಅವಧಿ).

ಬಹು ವಿಧದ ಅಡುಗೆಯವರು: 8ನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 45 ವರ್ಷದೊಳಗಿನವರಾಗಿರಬೇಕು. (ಐದು ತಿಂಗಳ ಅವಧಿ).

ಅರ್ಜಿಗಳನ್ನು ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಏ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ಖಾತರಿಯಾಗಿದೆ.

ತರಬೇತಿ ಪಡೆಯುವ ವೇಳೆ ರೂ.2000/- ರಂತೆ ಮಾಹೆಯಾನ ಸ್ಟೆöÊಫಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಸಮವಸ್ತç ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಉದ್ಯೋಗ ತರಬೇತಿ ಸಹ ನೀಡಲಾಗುವುದು.

ಐಹೆಚ್‌ಎಂ ಬೆಂಗಳೂರು ಮತ್ತು ಎಫ್‌ಸಿಐ ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು ಈ ಸಂಸ್ಥೆಗಳಿ0ದ ತರಬೇತಿ ನೀಡಿ ಪ್ರಮಾಣ ಪತ್ರಗಳನ್ನು ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿ ಅಥವಾ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ