Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಗೆ ಡಿಎಚ್‍ಒ ಚಾಲನೆ

ಮಡಿಕೇರಿ ಜೂ.28ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರಿಗೂ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟೈ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದರು.

ಮನೆಯಲ್ಲಿನ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರಲ್, ಫಾಟ್, ತೆಂಗಿನ ಚಿಪ್ಪು ಸೇರಿದಂತೆ ಇತರೆ ಕಡೆಗಳಲ್ಲಿ ನೀರು ಶೇಖರಣೆಯಾಗದಂತೆ ಗಮನಹರಿಸಬೇಕು. ತೊಟ್ಟಿ, ಡ್ರಮ್, ಬಕೆಟ್ಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆಯ ಮೊಟ್ಟೆಗಳು ನೀರಿಲ್ಲದಿದ್ದರೂ ಒಂದು ವರ್ಷದವರೆಗೆ ಬದುಕಲಿವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಸ್ವಚ್ಚಗೊಳಿಸಬೇಕು ಎಂದು ಸತೀಶ್ ಕುಮಾರ್ ಅವರು ಕರೆ ನೀಡಿದರು.

ಡೆಂಗ್ಯೂ ಜ್ವರವು ಹಗಲು ಹೊತ್ತಿನಲ್ಲಿ ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವುದರಿಂದ ಬರಲಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.

ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಮತ್ತು ಮಡಿಕೇರಿ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದರು.

ಈ ವರ್ಷ ಡೆಂಗ್ಯೂ ಪ್ರಕರಣದಿಂದ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದಾರೆ. ಆ ನಿಟ್ಟಿನಲ್ಲಿ ಪ್ರತೀ ಶುಕ್ರವಾರ ಡೆಂಗ್ಯೂ ಲಾರ್ವಾ ಸರ್ವೆ ಮಾಡಲಾಗುತ್ತದೆ. ಡೆಂಗ್ಯೂ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಜವರಿಯಿಂದ ಇಲ್ಲಿಯವರೆಗೆ 94 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 9 ಪ್ರಕರಣಗಳು, ಕುಶಾಲನಗರ ತಾಲ್ಲೂಕಿನಲ್ಲಿ 28 ಪ್ರಕರಣಗಳು, ಸೋಮವಾರಪೇಟೆ ತಾಲ್ಲೂಕಿನಲ್ಲಿ 1 ಪ್ರಕರಣ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 38 ಪ್ರಕರಣಗಳು, ವಿರಾಜಪೇಟೆ ತಾಲ್ಲೂಕಿನಲ್ಲಿ 18 ಪ್ರಕರಣಗಳು ಕಂಡುಬಂದಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಒಟ್ಟಾರೆ ಜನವರಿ ತಿಂಗಳಲ್ಲಿ 7, ಫೆಬ್ರವರಿ ತಿಂಗಳಲ್ಲಿ 11, ಮಾರ್ಚ್ನಲ್ಲಿ 9, ಏಪ್ರಿಲ್ನಲ್ಲಿ 8, ಮೇ ತಿಂಗಳಲ್ಲಿ 25, ಜೂನ್ ತಿಂಗಳಲ್ಲಿ 34 ಒಟ್ಟು 94 ಪ್ರಕರಣಗಳು ಕಂಡು ಬಂದಿದೆ ಎಂದು ಮಾಹಿತಿ ನೀಡಿದರು.

ಆರ್ಸಿಎಚ್. ಅಧಿಕಾರಿ ಡಾ.ಮಧುಸೂದನ್ ಅವರು ಮಾತನಾಡಿ ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಈಜಿಪ್ಟೈ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವುದನ್ನು ಸಾರ್ವಜನಿಕರ ದಿನಚರಿಯ ದೈನಂದಿನ ಅಭ್ಯಾಸ/ ಪದ್ಧತಿಯನ್ನಾಗಿ ಮಾಡುವುದರ ಮೂಲಕ ಹೆಚ್ಚಿನ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಗೆ ಚಾಲನೆ ನೀಡಲಾಗಿದೆ ಎಂದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಪೌರಾಯುಕ್ತರಾದ ವಿಜಯ್, ಪರಿಸರ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಶ್ರುಶ್ರೂಷಕರು, ಆರೋಗ್ಯ ಶಿಕ್ಷಕರು, ಆಶಾ ಕಾರ್ಯಕರ್ತರು, ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ