Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್


ಶಿವಮೊಗ್ಗ,ಮೇ.28 ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ ಬೋಧಕ ಸಿಬ್ಬಂದಿಗಳ ಕೊರತೆ ಇದೆ. ಆದ ಕಾರಣ ಬಿಎಎಂಎಸ್ ವಿದ್ಯಾರ್ಥಿಗಳ ಮಂಜೂರು ಸೀಟು 60 ಇದ್ದು, ದಾಖಲು ಸಂಖ್ಯೆ 33 ಕ್ಕೆ ಇಳಿಕೆಯಾಗಿದೆ.

ಆಯುರ್ವೇದ ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಸಹ ಇದ್ದು, ಇವರನ್ನು ನೇಮಕ ಮಾಡುವಂತೆ ಹಾಗೂ ಹೊಸದಾಗಿ ಪಿಜಿ ಕೋರ್ಸ್ ಆರಂಭಿಸಲು ಜಾಗದ ಅವಶ್ಯಕತೆ ಇದ್ದು, ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ವಿದ್ಯಾರ್ಥಿಗಳು ಮಾತನಾಡಿ, ಬಾಲಕರ ಹಾಸ್ಟೆಲ್ ಇಲ್ಲ. ಆದ್ದರಿಂದ ಸಮಸ್ಯೆಯಾಗುತ್ತಿದೆ. ಶೀಘ್ರದಲ್ಲಿ ಹಾಸ್ಟೆಲ್‌ಗೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಹಾಗೂ ಕ್ಯಾಂಟಿನ್, ವಸ್ತು ಸಂಗ್ರಹಾಲಯ, ಆಡಿಟೋರಿಯಂ, ಇಂಟರ್ನ್ಗಳಿಗೆ ಸ್ಟೆöÊಫಂಡ್ ಹೆಚ್ಚಳ ಮಾಡುಂತೆ ಕೋರಿದರು. ಮತ್ತು ವಿದ್ಯಾರ್ಥಿ ವೇತನ ಪಡೆಯುವಲ್ಲಿ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಸಮಸ್ಯೆ ಇದ್ದು ಸರಿಪಡಿಸುವಂತೆ ಮನವಿ ಮಾಡಿದರು.

ಸಚಿವರು ಪ್ರತಿಕ್ರಿಯಿಸಿ, ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕಾತಿ, ಪಿಜಿ ಕೋರ್ಸ್ ಆರಂಭಿಸಲು ಜಾಗ ನೀಡುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲೆಯಲ್ಲಿ 35 ಆಯುಷ್ ಕೇಂದ್ರಗಳಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಕೇಂದ್ರಗಳಿಗೆ ಸಂಬ0ಧಿಸಿದ0ತೆ ಜಾರಿ ಮಾಡಲಾದ ಹೊಸ ಮಾರ್ಗಸೂಚಿಯನ್ನು ಆಯುಷ್ ಇಲಾಖೆ ಪಾಲನೆ ಮಾಡಬೇಕು ಎಂದರು.

ಆಯುರ್ವೇದ ಆಸ್ಪತ್ರೆಗೆ ಹೆಚ್ಚುವರಿ ನೀರಿನ ಸಂಪರ್ಕ ಅಗತ್ಯವಿದ್ದು, ಶೀಘ್ರವೇ ಒದಗಿಸುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಹ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಕಳೆದ ಸಾಲಿನಲ್ಲಿ ರ್ಯಾಂಕ್ ಪಡೆದ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ, ಅಭಿನಂದಿಸಿದರು.

ಸಭೆಯಲ್ಲಿ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್, ಮಾಜಿ ವಿಧಾನಪರಿಷತ್ ಶಾಸಕ ಪ್ರಸನ್ನಕುಮಾರ್, ಮಾಜಿ ಪಾಲಿಕೆ ಸದಸ್ಯ ಯೋಗೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಿಂಗರಾಜು, ಕಾಲೇಜಿನ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ