Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ


ಬಳ್ಳಾರಿ,ಮಾ.03



ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬoಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.

ತಹಸೀಲ್ದಾರರಿoದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.

ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ