Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ


ಬೆಳಗಾವಿ, ಜುಲೈ ಅಲ್ಲಲ್ಲಿ ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.



ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.15) ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಜಲಮೂಲಗಳನ್ನು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪಿಡಿಓ ಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಹೇಳಿದರು.



ವಿವಿಧ ತಾಲ್ಲೂಕುಗಳಿಗೆ ಮಂಜೂರಾಗಿರುವ ಇಂದಿರಾ ಕ್ಯಾಂಟೀನ್ ಗಳ‌ ಸ್ಥಾಪನೆಗೆ ಲಭ್ಯವಿರುವ ಜಾಗೆಯ ಕುರಿತು ಅಧಿಕಾರಿಗಳಿಂದ‌ ಮಾಹಿತಿಯನ್ನು ಪಡೆದುಕೊಂಡರು.



ಘನತ್ಯಾಜ್ಯ ನಿರ್ವಹಣಾ ಘಟಕಗಳ ಸ್ಥಾಪನೆಗೆ ಅಗತ್ಯ ಜಮೀನು ಒದಗಿಸುವ ನಿಟ್ಟಿನಲ್ಲಿ ತಹಶೀಲ್ದಾರರು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.



ನೆರೆಯ ಮಹಾರಾಷ್ಟ್ರ ಸೇರಿದಂತೆ‌ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಸಂಭವನೀಯ ಪ್ರವಾಹ ನಿರ್ವಹಣೆಗೆ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಿರ್ದೇಶನ ನೀಡಿದರು.



ಇದಲ್ಲದೇ ಕಾಳಜಿ ಕೇಂದ್ರಗಳ ಸ್ಥಾಪನೆ; ಕಂದಾಯ ಗ್ರಾಮಗಳ ರಚನೆ; ಸಿಂಧುತ್ವ ಪ್ರಮಾಣಪತ್ರ ವಿತರಣೆ ಸೇರಿದಂತೆ ಇತರೆ ವಿಷಯಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು, ಸಂಬಂಧಿಸಿದ‌ ಇಲಾಖೆಯ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು.



ಅಪರ ಜಿಲ್ಲಾಧಿಕಾರಿ‌ ವಿಜಯಕುಮಾರ್ ಹೊನಕೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ‌ ಕಲಾದಗಿ, ಕೃಷಿ ಇಲಾಖೆಯ ಜಂಟಿ‌ ನಿರ್ದೇಶಕ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಜಂಟಿ‌ ನಿರ್ದೇಶಕ ನವೀನ್ ಶಿಂತ್ರೆ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ಸಭೆಯಲ್ಲಿ ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ