Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ


ಬಳ್ಳಾರಿ,ಮೇ 13

ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಸರ್ಕಾರೇತರ ಹಾಗೂ ಅನುದಾನಿತ ವಸತಿ ನಿಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚನೆ ನೀಡಿದ್ದಾರೆ.

‘06 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ಕಾರ್ಯವಿಧಾನಗಳ ಮಾರ್ಗಸೂಚಿಗಳು-2025’ ಅನ್ನು ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಈ ಪ್ರಕಟಣೆ ಹೊರಡಿಸಿದ ದಿನದಿಂದ 2 ತಿಂಗಳೊಳಗೆ ಎಲ್ಲಾ ವಸತಿ ನಿಲಯಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ವಸತಿ ನಿಲಯಗಳು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರೇತರ ಮತ್ತು ಅನುದಾನಿತ ವಸತಿ ನಿಲಯಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅರ್ಜಿ ಸಲ್ಲಿಸಬೇಕು. ಮಾರ್ಗಸೂಚಿ-2025 ರಲ್ಲಿ ನೀಡಲಾಗಿರುವ ‘ನಮೂನೆ-1' ರಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ನಗರದ ಕಂಟೋನ್‌ಮೆAಟ್ ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ (ದೂ.08392-241373) ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ